ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಮಾನಸಿಕ ಆರೋಗ್ಯಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗ ಅಗತ್ಯ"

ಮಂಗಳೂರು: ಮಾನಸಿಕ ಆರೋಗ್ಯಕ್ಕಾಗಿ ಮತ್ತು ಒತ್ತಡ ನಿವಾರಣೆಗೆ ಯೋಗ ಚಟುವಟಿಕೆ ಎಲ್ಲರಿಗೂ ಅಗತ್ಯವಿದೆ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್ ಸಿ ಎ ಶಾಂತಾರಾಮ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತಂಜಲಿ ಯೋಗ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರ ಕೆಲಸದ ಒತ್ತಡದ ಮಧ್ಯೆ ಯೋಗದಂತಹ ಚಟುವಟಿಕೆ ಮಾನಸಿಕ ಆರೋಗ್ಯ ಸಂರಕ್ಷಣೆಯ ದೃಷ್ಟಿಯಿಂದ ಮುಖ್ಯ ವಾಗುತ್ತದೆ. ಭಾರತದ ಯೋಗ ವಿಶ್ವಸಂಸ್ಥೆಯಲ್ಲಿ ಎಲ್ಲಾ ದೇಶಗಳ ಬೆಂಬಲ ಪಡೆದು ವಿಶ್ವ ಮಾನ್ಯತೆ ಪಡೆದು ವಿಶ್ವ ಯೋಗ ದಿನಾಚರಣೆಗೆ ಕಾರಣವಾಗಿರುವುದು ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದು ಶಾಂತರಾಮ ಶೆಟ್ಟಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಯೋಗ ಗುರು ಡಾ.ಜಗದೀಶ್ ಶೆಟ್ಟಿ ಬಿಜೈ ಹಾಗೂ ತಂಡದವರಿಂದ ಮತ್ತು ಪತ್ರಕರ್ತರಿಂದ ಯೋಗ ಪ್ರದರ್ಶನ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಭಾರತೀಯ ರೆಡ್‌ಕ್ರಾಸ್ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ರೈ, ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಸತೀಶ್ ಇರಾ ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

21/06/2022 07:22 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ