ಮುಲ್ಕಿ: ತಾಲೂಕು ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ಸುರಿದ ಬಾರೀ ಗಾಳಿ ಮಳೆಗೆ ಅಪಾರ ಹಾನಿಯಾಗಿದೆ.ಮುಲ್ಕಿ ತಾಲೂಕಿನ ಪಕ್ಷಿಕೆರೆ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತೂರು ಕಾಫಿ ಕಾಡು ಎಂಬಲ್ಲಿ ಶನಿವಾರ ಮಧ್ಯಾಹ್ನ ಬೀಸಿದ ಬಾರಿ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಸಂಜೀವ ಎಂಬವರ ಮನೆ ಪೂರ್ತಿ ಹಾನಿಯಾಗಿದೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಕೆಮ್ರಾಲ್ ಗ್ರಾಪಂ ಅಧ್ಯಕ್ಷೆ ಲೀಲಾ ಕೃಷ್ಣಪ್ಪ, ಉಪಾಧ್ಯಕ್ಷ ಸುರೇಶ್ ಪಂಜ, ಸದಸ್ಯರಾದ ನವೀನ್ ಸಾಲ್ಯಾನ್ ರೇವತಿ ಶೆಟ್ಟಿಗಾರ್ , ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಉಳಿದಂತೆ ತಾಲೂಕು ವ್ಯಾಪ್ತಿಯ ಹಳೆಯಂಗಡಿ, ಪಡು ಪಣಂಬೂರು, ಕಿನ್ನಿಗೋಳಿ, ಬಳಕುಂಜೆ, ಅಧಿಕಾರಿ ಬೆಟ್ಟು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಅಲ್ಪಸ್ವಲ್ಪ ಹಾನಿ ಸಂಭವಿಸಿದೆ.
Kshetra Samachara
16/07/2022 05:20 pm