ಮುಲ್ಕಿ: ಇಲ್ಲಿಗೆ ಸಮೀಪದ ಕಿಲ್ಪಾಡಿ ಗ್ರಾಮ ಪಂಚಾಯತ್ ಕಛೇರಿ ಯ ಬಳಿಯಲ್ಲಿ ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ ಪಡಂಗ ನೇತೃತ್ವದಲ್ಲಿ ತೆರವುಗೊಳಿಸಲಾಗಿದೆ.
ಕಳೆದ ಕೆಲ ಸಮಯದಿಂದ ಮರ ಬೀಳುವ ಸ್ಥಿತಿಯಲ್ಲಿದ್ದು ಮರದ ಕೆಳಗೆ ಅಂಗಡಿ ಕಾರ್ಯಾಚರಿಸುತ್ತಿದ್ದು ಹಾಗೂ ಶಾಲೆಯ ಮಕ್ಕಳು ಪ್ರತಿದಿನ ಬಸ್ಸಿಗಾಗಿ ಕಾಯುತ್ತಿದ್ದು ಮರ ಬಿದ್ದರೆ ಬಾರಿ ಅಪಾಯ ಸಂಭವಿಸುತ್ತಿತ್ತು. ಈ ಬಗ್ಗೆ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಮುಲ್ಕಿ ಮೆಸ್ಕಾಂ ಹಾಗೂ ಕಿಲ್ಪಾಡಿ ಪಂಚಾಯತ್ ಸಹಕಾರದೊಂದಿಗೆ ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ ಪಡಂಗ ಕಾರ್ಯಾಚರಣೆ ನಡೆಸಿ ಅಪಾಯಕಾರಿಯಾಗಿ ಬೀಳುವ ಸ್ಥಿತಿಯಲ್ಲಿದ್ದ ಮರವನ್ನು ತೆರವುಗೊಳಿಸಿದ್ದಾರೆ.
ಇದೇ ರೀತಿ ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯಲ್ಲಿ ಅನೇಕ ಮರಗಳು ಬೀಳುವ ಸ್ಥಿತಿಯಲ್ಲಿದ್ದು ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Kshetra Samachara
22/08/2022 03:20 pm