ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು:ಪ್ಲಾಸ್ಟಿಕ್ ವಸ್ತುಗಳ ಬಳಕೆ ಜಾಗೃತಿ ಹಾಗೂ ಮಾಹಿತಿ ಶಿಬಿರ

ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೇಸಿಐ ಮುಲ್ಕಿ ಶಾಂಭವಿ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಜಂಟಿಯಾಗಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಬಗ್ಗೆ ಜಾಗೃತಿ ಹಾಗೂ ಮಾಹಿತಿ ಶಿಬಿರ ಮತ್ತು ಕರಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿ ಸರಕಾರ ಈಗಾಗಲೇ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು ಗ್ರಾಮ ಗ್ರಾಮಗಳಲ್ಲಿ ಜನರ ಸಹಕಾರ ಮುಖ್ಯ ಎಂದರು.

ಮುಖ್ಯ ಅತಿಥಿಗಳಾಗಿ. ಮೂಡಬಿದ್ರೆ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ರಮೇಶ್ ರಾಥೋಡ್ ,ಮುಲ್ಕಿ ಉದ್ಯಮಿ ವಾಸು ಪೂಜಾರಿ, ಪಂಚಾಯತ್ ಕಾರ್ಯದರ್ಶಿಯೋಗೀಶ್, ಸಂಪನ್ಮೂಲ ವ್ಯಕ್ತಿಯಾಗಿ ಸುದೇಶ್ ಕಿಣಿ ಮಾಹಿತಿ ನೀಡಿದರು. ಕಾರ್ಯಕ್ರಮ ಸಂಯೋಜಕರಾಗಿ ಎನ್.ಜಿ.ಓ ಸಾಹಸ್ ಮಂಗಳೂರು ನಡೆಸಿ ಕೊಟ್ಟರು. ಜೇಸಿಐ ಅಧ್ಯಕ್ಷ ಕಲ್ಲಪ್ಪ ತಡವಲಗ, ವಲಯ ಉಪಾಧ್ಯಕ್ಷ ದಿನೇಶ್ ಕೆ ಶೆಟ್ಟಿ, ಕಾರ್ಯದರ್ಶಿ .ವಿಶ್ವನಾಥ್ ಶೆಣೈ ಎಚ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/09/2022 01:10 pm

Cinque Terre

828

Cinque Terre

0