ಮುಲ್ಕಿ: ಮುಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಹಿರಿಯ ನಾಗರಿಕರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿರಿಯರನ್ನು ಸಮಾಜದಲ್ಲಿ ಗುರುತಿಸಲು ಮಕ್ಕಳಿಗೆ ಎಳವೆಯಲ್ಲಿ ಸಂಸ್ಕಾರ ಕಲಿಸಿಕೊಡಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಉದ್ಯಮಿ ವಾಸು ಪೂಜಾರಿ ಚಿತ್ರಾಪು, ಅಶೋಕ್ ಕುಮಾರ್ ಶೆಟ್ಟಿ ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕ ಡಾ. ಹರಿಶ್ಚಂದ್ರ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಕಾರ್ಯಕರ್ತ ಕಟಪಾಡಿ ಶಂಕರ ಪೂಜಾರಿ ಹಿರಿಯ ನಾಗರಿಕರ ಗುರುತು ಚೀಟಿ ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ನಿವೃತ್ತ ಉಪ ತಹಶೀಲ್ದಾರ್ ಯೋಗೀಶ್ ರಾವ್ ಏಳಿಂಜೆ ಹಾಗೂ ಸಾಮಾಜ ಸೇವಕಿ ಯಶೋದ ಜಯಶೀಲ ಸನಿಲ್ ಅವರನ್ನು ಗೌರವಿಸಲಾಯಿತು.
Kshetra Samachara
21/08/2021 05:41 pm