ಮುಲ್ಕಿ: ಆಟೋ ಚಾಲಕರಾಗಿ ದುಡಿಯುತ್ತಿದ್ದ ಸುಧಾಕರ್ ಎಂಬುವವರು ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು.
ಹದಗೆಟ್ಟ ಆರ್ಥಿಕ ಪರಿಸ್ಥಿತಿಯ ಕಾರಣದಿಂದಾಗಿ ಕುಟುಂಬಕ್ಕೆ ದಿಕ್ಕುದೋಚದಂತಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನೊಂದೆಡೆ ವೈದ್ಯರು ಇಂದೇ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ತಿಳಿಸಿದ್ದರು.
ಸುಧಾಕರ್ ರವರ ಕುಟುಂಬದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮನಗಂಡ ಮೂಲ್ಕಿ ಮೂಡುಬಿದಿರೆಯ ಶಾಸಕ ಉಮಾನಾಥ್ ಕೋಟ್ಯಾನ್ ಆಸ್ಪತ್ರೆಗೆ ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ 25,000 ರೂ ಸಹಾಯ ಹಸ್ತ ನೀಡಿ ಕುಟುಂಬಸ್ಥರಿಗೆ ಧೈರ್ಯತುಂಬಿ ಮುಂದಿನ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ವಿಶೇಷ ಕಾಳಜಿ ವಹಿಸುವಂತೆ ಮನವಿ ಮಾಡಿದ್ದಾರೆ.
ಶಾಸಕರ ಸಹಾಯ ಹಸ್ತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿನಂದನೆ ವ್ಯಕ್ತವಾಗಿದೆ.
Kshetra Samachara
24/11/2021 06:53 pm