ಮುಲ್ಕಿ: ಕನ್ನಡ ಸಾಹಿತ್ಯ ಪರಿಷತ್ತನ್ನು ಹಳ್ಳಿಹಳ್ಳಿಗೂ ವಿಸ್ತರಿಸುವ ಮೂಲಕ ಕನ್ನಡದ ಕಂಪನ್ನು ನಾಡಿನಲ್ಲೆಡೆ ಪಸರಿಸುವ ಯೋಜನೆ ಇದ್ದು ಕನ್ನಡ ಅಭಿಮಾನಿಗಳ ಸಹಕಾರ ಬೇಕು ಎಂದು ನೂತನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾಕ್ಟರ್ ಎಂಪಿ ಶ್ರೀನಾಥ್ ಹೇಳಿದರು.
ಅವರು ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದ ಸಾಧಕರ ಗೌರವ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಂಪಿ ಶ್ರೀನಾಥ್ ರವರನ್ನು ಗೌರವಿಸಲಾಯಿತು.
ಈ ಸಂದರ್ಭ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಉದ್ಯಮಿ ಸೂರ್ಯಕಾಂತ ಜಯ ಸುವರ್ಣ, ಡಾ. ಅಚ್ಯುತ ಕುಡ್ವ, ಜಾನ್ ಕ್ವಾಡ್ರಸ್, ವಾಸು ಪೂಜಾರಿ ಚಿತ್ರಾಪು, ಅಶೋಕ್ ಕುಮಾರ್ ಶೆಟ್ಟಿ, ಜಯಪಾಲ್ ಶೆಟ್ಟಿ, ಐಕಳಬಾವ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಕೊಕ್ಕರಕಲ್, ಹೊಸ ಅಂಗಣದ ಸಂಪಾದಕ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕುಬೆವೂರು, ರವಿಚಂದ್ರ ರಾವ್, ವಾಮನ ಕೋಟ್ಯಾನ್ ನಡಿಕುದ್ರು ಉಪಸ್ಥಿತರಿದ್ದರು.
Kshetra Samachara
24/12/2021 10:31 am