ಮಂಗಳೂರು: ನಗರ ಪಾಲಿಕೆಯ 19- ಪಚ್ಚನಾಡಿ ವಾರ್ಡ್ ನಾದ್ಯಂತ ಒಟ್ಟು 86.35 ಲಕ್ಷ ರೂ ಅನುದಾನದಡಿ ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ಈ ಕಾರ್ಯಕ್ಕೆ ಶಾಸಕ ಡಾ. ಭರತ್ ವೈ ಶೆಟ್ಟಿ ಚಾಲನೆ ನೀಡಿದರು. ಇದರಲ್ಲಿ ಪ್ರಮುಖವಾಗಿ ಬಂದಲೆ ದೈವಸ್ಥಾನದ ರಾಜಾಂಗಣ 20 ಲಕ್ಷ ರೂ ಅನುದಾನದಲ್ಲಿ ಅಭಿವೃದ್ಧಿ ಗೊಳ್ಳಲಿದೆ.
ಈ ಎಲ್ಲಾ ಕಾಮಗಾರಿಗಳಿಗೆ ಇಂದು ಬಂದಲೆ ಜುಮಾದಿ ಬಂಟ* ದೈವಸ್ಥಾನದಲ್ಲಿ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೊಂದೆಲ್, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೊಡಿ, ಬಂದಲೆ ದೈವಸ್ಥಾನದ ಜಗದೀಶ್ ಮುಂಡ ಪೂಜಾರಿ, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು
ಮನಪಾ ಅಧಿಕಾರಿ ವರ್ಗದವರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯರು, ಪಕ್ಷದ ಹಿತೈಷಿಗಳು, ಬಂದಲೆ ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರು, ದೈವಸ್ಥಾನಕ್ಕೆ ಸಂಬಂಧ ಪಟ್ಟ ಗುತ್ತು ಮನೆತನದವರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
29/01/2022 01:47 pm