ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಸ್ ಸಮಗ್ರ ಆಶ್ರಯದಲ್ಲಿ ಮಾ.10 ರಂದು ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ ನಡೆಯಲಿದೆ.

ಬೆಳಿಗ್ಗೆ 6 ಗಂಟೆಗೆ ನಿಶ್ಮಿತಾ ಟವರ್ಸ್ ಬಳಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ದ.ಕ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್ ಕ್ರಾಸ್ ಕಂಟ್ರಿ ಓಟಕ್ಕೆ ಚಾಲನೆ ನೀಡಲಿದ್ದಾರೆ. ಸ್ಪರ್ಧೆಯ ಬಳಿಕ 10 ಗಂಟೆಗೆ ಬಹುಮಾನ ವಿತರಣೆ ಕನ್ನಡ ಭವನದಲ್ಲಿ ನಡೆಯಲಿದೆ.

ಮಂಗಳೂರು ವಿವಿ ಉಪಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ರಿಜಿಸ್ಟ್ರಾರ್ ಕಿಶೋರ್ ಕುಮಾರ್ ಸಿ. ಕೆ, ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ತಾಲೂಕು ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಉಪಸ್ಥಿತರಿರಲಿದ್ದಾರೆ.

ದೇಶದ 200 ಯುನಿವರ್ಸಿಟಿಗಳ ಸುಮಾರು 2000 ಅಥ್ಲೀಟ್‌ಗಳು ಭಾಗವಹಿಸಲಿದ್ದು, ನಿಶ್ಮಿತಾ ಟರ‍್ಸ್ನಿಂದ ಮಹಾವೀರ ಕಾಲೇಜು, ಬೆಟ್ಕೇರಿ, ಅಲಂಗಾರು ರಿಂಗ್ ರೋಡ್ ಮಾರ್ಗವಾಗಿ 10ಕಿಮೀ ದೂರ ಕ್ರಮಿಸಿ ಬಳಿಕ ಸ್ವರಾಜ್ಯ ಮೈದಾನದಲ್ಲಿ ಕೊನೆಗೊಳ್ಳಲಿದೆ. ಎರಡು ತಿಂಗಳಿನ ಅಂತರದಲ್ಲಿ ಆಳ್ವಾಸ್ ಸಂಸ್ಥೆಯಿಂದ ಆಯೋಜನೆಗೊಳ್ಳುತ್ತಿರುವ 3ನೇ ರಾಷ್ಟ್ರೀಯ ಕ್ರೀಡಾಕೂಟವಿದು ಎನ್ನುವುದು ಉಲ್ಲೇಖನೀಯ.

Edited By : PublicNext Desk
Kshetra Samachara

Kshetra Samachara

09/03/2022 08:13 pm

Cinque Terre

1.4 K

Cinque Terre

0

ಸಂಬಂಧಿತ ಸುದ್ದಿ