ಮುಲ್ಕಿ: ನಾಳೆ (ಮಾರ್ಚ್ 15) ಹಿಜಾಬ್ ಕುರಿತು ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಆ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮಧ್ಯರಾತ್ರಿಯಿಂದ ನಿಷೇಧಾಜ಼್ಞೆ ಜಾರಿಗೊಳಿಸಲಾಗಿದೆ. ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳ್ಳುವ ಸಂಭವ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಹಾಗೂ ನಿಷೇಧಾಜ್ಞೆ ಜಾರಿಗೊಂಡಿದೆ. ಅತಿ ಸೂಕ್ಷ್ಮ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಎಲ್ಲಾ ರೀತಿಯ ಸಭೆ ಸಮಾರಂಭ,ಮೆರವಣಿಗೆಗಳ ಮೇಲೆ ನಿಷೇದ ಹೇರಲಾಗಿದೆ.
ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಸುರತ್ಕಲ್ ಟೋಲ್ ಚಲೋ ಪಾದಯಾತ್ರೆ ನಡೆಸುವುದು ಅಸಾಧ್ಯವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಲಿರುವ ಜನರ ಹಿತ, ಸುರಕ್ಷೆ, ಕಾನೂನಿನ ಅಂಶಗಳನ್ನು ಗಮನದಲ್ಲಿಟ್ಟು ಸುರತ್ಕಲ್ ನಲ್ಲಿ ತುರ್ತಾಗಿ ಸಭೆ ಸೇರಿದ ಲಭ್ಯ ಮುಖಂಡರ ಸಭೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದೆ. ನಾಳೆ (15 )ಬೆಳಿಗ್ಗೆ ಹೆಜಮಾಡಿಯಲ್ಲಿ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳ ಸಭೆ ಸೇರಿ ಮುಂದಿನ ದಿನಾಂಕ ಪ್ರಕಟಿಸಲಾಗುವುದು.
ಎಂದು ಆಧ್ಯಕ್ಷರು ಹಾಗೂ ಸದಸ್ಯರು ಮುಲ್ಕಿ ತಾಲೂಕು ಅಭಿವೃದ್ದಿ ಸಮಿತಿ ಪ್ರಕಟಣೆ ತಿಳಿಸಿದೆ.
Kshetra Samachara
14/03/2022 11:10 pm