ಮುಲ್ಕಿ: ಮುಲ್ಕಿಯ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀದೇವರ ಪೇಟೆ ಸವಾರಿ ಹಾಗೂ ಕಟ್ಟೆ ಪೂಜೆ ನಡೆಯಿತು.
ಈ ಸಂದರ್ಭ ಮುಲ್ಕಿಯ ಪಂಚಮಹಲ್ ಶ್ರೀ ಸದಾಶಿವ ದೇವಸ್ಥಾನಕ್ಕೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಶ್ರೀದೇವಿಯ ಭೇಟಿ ನಡೆದು ಎರಡು ದೇವರುಗಳಿಗೆ ಏಕಕಾಲದಲ್ಲಿ ವಿಶೇಷ ಪೂಜೆ ನಡೆಯಿತು.
ದೇವಸ್ಥಾನದ ಅನುವಂಶಿಕ ಮುಕ್ತೇಸರ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪುನರ್ವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಅರ್ಚಕ ಶ್ರೀನಾಥ್ ಭಟ್, ಸುನಿಲ್ ಆಳ್ವ, ಗೋಪಾಲಕೃಷ್ಣ ಭಟ್, ನಾಗೇಶ್ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
21/03/2022 08:18 am