ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ಶಾಲೆಯನ್ನು ಉಳಿಸಿ, ಬೆಳೆಸುವ ಪ್ರಯತ್ನ ಆಗಬೇಕು: ಶಾಸಕ ಕೋಟ್ಯಾನ್

ಮೂಡುಬಿದಿರೆ: ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿರಾಜ ಕಾಲೋನಿ, ಪುಚ್ಚಮೊಗರು ಇದರ ಶಾಲಾ ರಜತ ಮಹೋತ್ಸವದ ಅಂಗವಾಗಿ ರಂಗವೇದಿಕೆ, ಕಾಂಕ್ರೀಟ್ ರಸ್ತೆ, ಶಾಲಾ ಕಟ್ಟಡವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ನಂತರ ಮಾತನಾಡಿದ ಕೋಟ್ಯಾನ್, ವಿದ್ಯಾರ್ಥಿಗಳ ಏಳಿಗೆಯನ್ನು ಕತ್ತಲೆಯಿಂದ ಬೆಳಕಿನಡೆಗೆ ತಂದು ಸಮಾಜಕ್ಕೆ ಪರಿಚಯ ಮಾಡುವ ಪ್ರಯತ್ನ ಕನ್ನಡ ಮಾಧ್ಯಮ ಶಾಲೆ ಮಾಡುತ್ತಿದೆ. ಆಂಗ್ಲ ಮಾಧ್ಯಮಕ್ಕೆ ಹೋಗುವುದರಿಂದ ಕನ್ನಡ ಮಾಧ್ಯಮ ಮುಚ್ಚುವ ಪರಿಸ್ಥಿತಿಗೆ ಬರುತ್ತದೆ. ಈ ಸಂದರ್ಭದಲ್ಲಿ ಶಾಲೆಯನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಊರಿನವರು ಹಾಗೂ ಹಳೆವಿದ್ಯಾರ್ಥಿಗಳು ಸೇರಿ ಮಾಡಬೇಕು. ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ವಿದ್ಯಾರ್ಥಿಗಳು ತುಂಬಿ ತುಳುಕುವಂತೆ ಆಗಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಉಗ್ಗಪ್ಪ ಪೂಜಾರಿಯವರ ರಜತಾಂಜಲಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

Edited By : PublicNext Desk
Kshetra Samachara

Kshetra Samachara

27/03/2022 07:54 am

Cinque Terre

1.31 K

Cinque Terre

0

ಸಂಬಂಧಿತ ಸುದ್ದಿ