ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು; "ಸರಕಾರಿವಿದ್ಯಾ ದೇಗುಲದ ನಿರ್ಮಾಣಕ್ಕೆ ಕೈ ಜೋಡಿಸೋಣ": ಉಮಾನಾಥ್

ಮುಲ್ಕಿ: ಪಡುಪಣಂಬೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ನೆರವೇರಿಸಿದರು.

ಈ ಸಂದರ್ಭ ಅವರು ಮಾತನಾಡಿ ಸರಕಾರಿ ಶಾಲೆಯ ನಿರ್ಮಾಣ ನಮ್ಮ ಗುರಿಯಾಗಿದ್ದು ಎಲ್ಲರೂ ಕೈಜೋಡಿಸಿದರೆ ಮಾತ್ರ ಅಭಿವೃದ್ಧಿ ಕಾರ್ಯಗಳು ಮುಂದುವರೆಯಲು ಸಾಧ್ಯಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಪಂ ಅಧ್ಯಕ್ಷೆ ಮಂಜುಳಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ ಭುಜಂಗಶೆಟ್ಟಿ, ಕಾಂತಣ್ಣ ಗುರಿಕಾರ,ಗ್ರಾಪಂ ಉಪಾಧ್ಯಕ್ಷೆ ಕುಸುಮ ಚಂದ್ರಶೇಖರ್, ಸದಸ್ಯ ಉಮೇಶ್ ಪೂಜಾರಿ ಹರಿಪ್ರಸಾದ್ ,ದಿನೇಶ್ ಶೆಟ್ಟಿ ಪಡುಪಣಂಬೂರು ಯುವಕ ಮಂಡಲದ ಅಧ್ಯಕ್ಷ ಶಾಮ್ ಪ್ರಸಾದ್, ವಿನೋದ್ ಸಾಲ್ಯಾನ್ ಬೆಳ್ಳಾಯರು, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಉಸ್ಮಾನ್, ಗೌತಮ್ ಜೈನ್, ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ರೂಪಕಲಾ, ಪ್ರಭಾರ ಮುಖ್ಯೋಪಾಧ್ಯಾಯಿನಿ ಸಮತಾ ಮತ್ತಿತರರು ಉಪಸ್ಥಿತರಿದ್ದರು.ಜನಾರ್ದನ ಪಡುಪಣಂಬೂರು ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

27/03/2022 10:24 am

Cinque Terre

2.45 K

Cinque Terre

1

ಸಂಬಂಧಿತ ಸುದ್ದಿ