ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆಯ ನೂತನ ಕೊಠಡಿ ಉದ್ಘಾಟನೆ

ಮೂಡುಬಿದಿರೆ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆಯ ನೂತನ ಕೊಠಡಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಶಾಲೆಯ ಅನ್ವೇಷಣೆ ಇಕೋ ಕ್ಲಬ್ ನಲ್ಲಿ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಹುಟ್ಟೂರಿಗೆ ವರ್ಗಾವಣೆಯಾಗಿರುವ ಶಿಕ್ಷಕಿ ಅಕ್ಷತಾ ಅವರನ್ನು ಬೀಳ್ಕೊಟ್ಟು, ಭಾಗೀನ ಅರ್ಪಿಸಲಾಯಿತು. ಹಾಗೂ ಲ್ಯಾಪ್‌ಟಾಪ್ ಒದಗಿಸಿರುವ ದಾನಿ ರಾಬರ್ಟ್ ಮಿನೇಜಸ್ ಅವರನ್ನು ಸನ್ಮಾನಿಸಲಾಯಿತು.

ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಜಯಲಕ್ಷ್ಮೀ, ಸರಕಾರಿ ಶಿಕ್ಷಕರ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಮುನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಪ್ರತಿಮ, ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್, ಮಾಜಿ ಜಿ.ಪಂ ಸದಸ್ಯ ಸುಚರಿತ ಶೆಟ್ಟಿ, ಪಂಚಾಯತ್ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/03/2022 03:49 pm

Cinque Terre

952

Cinque Terre

0

ಸಂಬಂಧಿತ ಸುದ್ದಿ