ಮೂಡುಬಿದಿರೆ: ಒರಿಸ್ಸಾದ ಭುವನೇಶ್ವರದಲ್ಲಿ ಜರುಗುತ್ತಿರುವ ರಾಷ್ಟ್ರೀಯ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಉಷಾ ಬಿ.ಎನ್ ಚಿನ್ನದ ಪದಕವನ್ನು ಪಡೆದಿದ್ದಾರೆ.
ಮೂಲತಃ ಅರಸೀಕೆರೆಯವರಾದ ಉಷಾ ಬಿ.ಎನ್ ತನ್ನ ಪದವಿಪೂರ್ವ ಶಿಕ್ಷಣದಿಂದ ಸ್ನಾತಕೋತ್ತರ ಶಿಕ್ಷಣವನ್ನು ಆಳ್ವಾಸ್‌ನಲ್ಲಿ ದತ್ತು ಶಿಕ್ಷಣದಡಿ ಪೂರೈಸಿದ್ದಾರೆ. ಪ್ರಸ್ತುತ ಇಂಡಿಯನ್ ರೈಲ್ವೇಸ್‌ನ ಉದ್ಯೋಗಿಯಾಗಿದ್ದಾರೆ.
ಕಾಮನ್ವೆಲ್ತ್ ಚಾಂಪಿಯನ್ ಆಗಿರುವ ಉಷಾ ಏಪ್ರಿಲ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಜರಗಲಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಇವರ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಶ್ಲಾಘಿಸಿದ್ದಾರೆ.
Kshetra Samachara
31/03/2022 05:47 pm