ಸುರತ್ಕಲ್ : ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮ ಪಂಚಾಯತ್ ನಲ್ಲಿ ಎಂಆರ್ಪಿಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಲ್ಲಿ ನಿರ್ಮಿಸಲಾದ ನೂತನ ಗ್ರಾಮ ಪಂಚಾಯತ್ ಕಟ್ಟಡ ಮತ್ತು ಎರಡು ಅಂಗನವಾಡಿ ಕೇಂದ್ರಗಳನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟನೆ ಮಾಡಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತ್ ಸದಸ್ಯರು ಗ್ರಾಮಸ್ಥರಿಗೆ ಸರಕಾರದ ಸವಲತ್ತುಗಳನ್ನು ದೊರಕಿಸಲು ಶ್ರಮವಹಿಸಬೇಕು ಎಂದರು.
ಈ ಸಂದರ್ಭ ಸೂರಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು ಸಿಬ್ಬಂದಿವರ್ಗ ಅಧಿಕಾರಿವರ್ಗ ಉಪಸ್ಥಿತರಿದ್ದರು.
Kshetra Samachara
05/04/2022 01:16 pm