ಮೂಡುಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 3 ಮಂದಿ ಕ್ರೀಡಾಪಟುಗಳಿಗೆ ರಾಜ್ಯ ಸರಕಾರ ಕೊಡಮಾಡಲ್ಪಡುವ 2020ನೇ ಸಾಲಿನ “ಕರ್ನಾಟಕ ಕ್ರೀಡಾರತ್ನ”ಪ್ರಶಸ್ತಿ ದೊರೆತಿದೆ. ಬಾಲ್ಬ್ಯಾಡ್ಮಿಂಟನ್ನಲ್ಲಿ ಕಿರಣ್ಕುಮಾರ್, ಕುಸ್ತಿಯಲ್ಲಿ ಲಕ್ಷ್ಮೀ ರೇಡೇಕರ್ ಹಾಗೂ ಖೋಖೋ ದಲ್ಲಿ ದೀಕ್ಷಾ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾದ ಕ್ರೀಡಾಪಟುಗಳು.
ಕಿರಣ್ಕುಮಾರ್:
ಪ್ರಸಕ್ತ ಕರ್ನಾಟಕ ರಾಜ್ಯ ತಂಡದ ನಾಯಕರಾಗಿರುವ ಕಿರಣ್ ಒಟ್ಟು 16 ಬಾರಿ ರಾಜ್ಯ ತಂಡವನ್ನು ರಾಷ್ಟಿçÃಯ ಸೀನಿಯರ್ ಹಾಗೂ ಫೆಡರೇಶನ್ಕಪ್ ಚಾಂಪಿಯನ್ಶಿಪ್ಗಳಲ್ಲಿ ಪ್ರತಿನಿಧಿಸಿದ್ದು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಟ್ಟು 4 ಬಾರಿಚಿನ್ನ, 4 ಬಾರಿ ಬೆಳ್ಳಿ ಹಾಗೂ 8 ಬಾರಿ ಕಂಚಿನ ಪದಕ ಪಡೆದಿರುವರು. ಅಖಿಲ ಭಾರತ ಅಂತರ್ ವಿ.ವಿ ಕೂಟ ಚಾಂಪಿಯನ್ ತಂಡದ ನಾಯಕರಾಗಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದು, 4 ಬಾರಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ್ದಾರೆ.
ಲಕ್ಷ್ಮೀ ರೇಡೇಕರ್:
ಒಟ್ಟು 5 ಬಾರಿ ರಾಷ್ಟ್ರೀಯ ಸೀನಿಯರ್ ಹಾಗೂ ಜೂನಿಯರ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಇವರು ರಾಷ್ಟ್ರೀಯ ಜೂನಿಯರ್ ಕೂಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. 2 ಬಾರಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಹಾಗೂ 1 ಬಾರಿ ಖೇಲೋ ಇಂಡಿಯಾ ಕೂಟದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. 2018ರಲ್ಲಿ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನ ನಿಮಿತ್ತ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದರು. 3 ಬಾರಿ ಅಖಿಲ ಭಾರತ ಅಂತರ್ ವಿವಿ ಕುಸ್ತಿಯಲ್ಲಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ್ದರು.
ದೀಕ್ಷಾ:
ಒಟ್ಟು 8 ಬಾರಿ ರಾಷ್ಟೀಯ ಖೋ-ಖೋ ಚಾಂಪಿಯನ್ಶಿಪ್ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿರುವ ಇವರು 4 ಬಾರಿ ಬೆಳ್ಳಿ ಹಾಗೂ 4 ಬಾರಿ ಕಂಚಿನ ಪದಕವನ್ನು ಪಡೆದಿರುತ್ತಾರೆ. 2 ಬಾರಿ ಅಖಿಲ ಭಾರತ ಅಂತರ್ ವಿ.ವಿ ಕೂಟಗಳಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದು 1 ಬಾರಿ ಚಿನ್ನ ಹಾಗೂ 1 ಬಾರಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಆಹ್ವಾನಿತ ಖೋಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಪ್ರಶಸ್ತಿ ಪುರಸ್ಕೃತ 3 ಮಂದಿ ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಚಿತ ಶಿಕ್ಷಣದ ವಿದ್ಯಾರ್ಥಿಗಳಾಗಿದ್ದಾರೆ. ಗ್ರಾಮೀಣ ಕ್ರೀಡೆಗಳಿಗೆ ನಮ್ಮ ಸಂಸ್ಥೆಯಲ್ಲಿ ವಿಶೇಷ ಪ್ರಾಶಸ್ತ್ಯ ನೀಡಲಾಗಿದ್ದು ಈ ಗ್ರಾಮೀಣ ಕ್ರೀಡೆಗಳಲ್ಲಿ ರಾಜ್ಯ ಪ್ರಶಸ್ತಿ ದೊರೆತಿರುವುದು ಸಂತಸತಂದಿದೆ.
Kshetra Samachara
05/04/2022 02:52 pm