ಮೂಡುಬಿದಿರೆ: ಬಿಜೆಪಿ ಮೂಲ್ಕಿ - ಮೂಡುಬಿದಿರೆ ಮಂಡಲದ ವತಿಯಿಂದ ನೆಲ್ಲಿಕಾರು ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಸ್ಥಾಪನಾ ದಿನದ ಕಾರ್ಯಕ್ರಮವು ಬುಧವಾರದಂದು ನಡೆಯಿತು.
ಶಾಸಕ ಉಮಾನಾಥ್ ಕೋಟ್ಯಾನ್, ಭಾರತೀಯ ಜನತಾ ಪಾರ್ಟಿ ಶಿರ್ತಾಡಿ ಮಹಾಶಕ್ತಿಕೇಂದ್ರ ವ್ಯಾಪ್ತಿಯ ನೆಲ್ಲಿಕಾರು ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನ ಆಲಿಸಿದರು.
ಮಂಡಲಾಧ್ಯಕ್ಷರಾದ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ , ಕೇಶವ ಕರ್ಕೇರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ದಿವ್ಯವರ್ಮ ಬಲ್ಲಾಳ್ ಮತ್ತು ಸ್ಥಳೀಯ ಜನಪ್ರತಿನಿಧಿನಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
06/04/2022 09:10 pm