ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಲ್ಪಾಡಿ: 'ಸ್ವಚ್ಛತಾ ಸಪ್ತಾಹದ ಅಭಿಯಾನ"

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಕಾರದೊಂದಿಗೆ ಕಿಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಪ್ತಾಹ ಅಭಿಯಾನ ನಡೆಯಿತು. ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೆಂಚನಕೆರೆ ಬಳಿ ದುಷ್ಕರ್ಮಿಗಳು ಬಿಸಾಡಿರುವ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡಲಾಗುತ್ತಿದ್ದು ಹೆದ್ದಾರಿ ಬದಿ ಕಸ ಬಿಸಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭ ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ನಾಡ್ ಶ್ರೀ ರಾಮ ಸೇವಾ ಮಂಡಳಿ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್, ಜೆಸಿಐ ಅಧ್ಯಕ್ಷ ಕಲ್ಲಪ್ಪ ತಡವಲಗ, ಕೇಶವ ಸುವರ್ಣ ಪಂಚಾಯತ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/04/2022 05:50 pm

Cinque Terre

2.71 K

Cinque Terre

0

ಸಂಬಂಧಿತ ಸುದ್ದಿ