ಮೂಡುಬಿದಿರೆ: ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಪ್ರಾಮಾಣಿಕ ಸಿಎಂ ಆಗಿದ್ರೆ ತಮ್ಮ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನನ್ನು ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಅವರನ್ನು ಬಂಧಿಸಿ ಸಂಪುಟದಿಂದ ವಜಾ ಮಾಡಬೇಕು ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮುಖ್ಯಮಂತ್ರಿಗೆ ಸವಾಲೆಸೆದರು.
ಅವರು ಕಮೀಷನ್ ದಂಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರ ಸಾವಿಗೆ ಕಾರಣೀಕರ್ತರಾಗಿರುವ ಸಚಿವ ಈಶ್ವರಪ್ಪನ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಕಛೇರಿ ಎದುರು ಬುಧವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಕಮೀಷನ್ ದಂಧೆಯಿಂದಾಗಿ ಬೆಳಗಾವಿ ಮೂಲದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈಶ್ವರಪ್ಪನವರ ಹೆಸರು ಬರೆದಿಟ್ಟು ಉಡುಪಿಯಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದರೂ ಈವರೆಗೆ ಪೊಲೀಸರು ಅವರನ್ನು ಬಂಧಿಸಿಲ್ಲವೆಂದು ಆರೋಪಿಸಿದ ಅವರು ಈ ಬಗ್ಗೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು.
ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಪುರಸಭಾ ಸದಸ್ಯರಾದ ಕೊರಗಪ್ಪ, ಪಿ.ಕೆ.ಥೋಮಸ್, ಸುರೇಶ್ ಕೋಟ್ಯಾನ್, ಪುರಂದರ ದೇವಾಡಿಗ, ಹಿದಾಯತ್ತುಲ್ಲಾ, ಇಕ್ಬಾಲ್ ಕರೀಂ, ಸುರೇಶ್ ಪ್ರಭು, ಪುತ್ತಿಗೆ ಗ್ರಾ.ಪಂ ಸದಸ್ಯರಾದ ಮುರಳೀಧರ್ ಕೋಟ್ಯಾನ್, ವಾಲ್ಪಾಡಿ ಗ್ರಾ.ಪಂ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪಡುಮಾರ್ನಾಡು ಗ್ರಾ.ಪಂ. ಉಪಾಧ್ಯಕ್ಷ ಅಭಿನಂದನ್ ಬಲ್ಲಾಳ್, ಮುಖಂಡರಾದ ರಾಜೇಶ್ ಕಡಲಕೆರೆ, ಶಿವಾನಂದ ಪಾಂಡ್ರು, ಜೋಕಿಂ ಕೊರೆಯಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ಹಠಾವೋ ಘೋಷಣೆಯನ್ನು ಕೂಗಿದರು.
Kshetra Samachara
13/04/2022 03:06 pm