ಮುಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಹಾಗೂ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಕೆಂಚನಕೆರೆಯ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನಡೆಯಿತು.
ಕೃಷಿ ಅಧಿಕಾರಿ ಬಶೀರ್ ರವರು ಕಿಸಾನ್ ಕ್ರೆಡಿಟ್ ಕಾರ್ಡ್ ನ ಉಪಯೋಗದ ಬಗ್ಗೆ ಮಾಹಿತಿ ಯನ್ನು ಸಭೆಗೆ ನೀಡಿದರು.
ಮುಲ್ಕಿ ಯೂನಿಯನ್ ಬ್ಯಾಂಕ್ ನ ಮ್ಯಾನೇಜರ್ ಸುಶಾಂತ್ ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಬೇಕಾದ ಅವಶ್ಯಕ ದಾಖಲೆಗಳ (ವಿಧಾನಗಳ ) ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಂಕೇತ್ ರವರು ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ರವರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರೈತರಿಗೆ ಸಿಗುವ ಸವಲತ್ತು ಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ, ಸದಸ್ಯರಾದ ಮಮತಾ, ಕೆಂಚನಕೆರೆ ಹಾಲಿನ ಒಕ್ಕೂಟದ ಅಧ್ಯಕ್ಷರಾದ ಕ್ಯಾನುಟ್ ಅರಾಹ್ನ ಉಪಸ್ಥಿತರಿದ್ದರು.
Kshetra Samachara
30/04/2022 03:26 pm