ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಹಕ್ಕು ಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣೆ

ಮೂಡುಬಿದಿರೆ: ಜನರಿಗೆ ಸರಕಾರವು ಹಲವರು ಯೋಜನೆಗಳನ್ನು ಜಾರಿಗೊಳಿಸಿದ್ದು, ಎಲ್ಲಾ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸಬೇಕೆಂಬ ನಿಟ್ಟಿನಲ್ಲಿ ಹಕ್ಕು ಪತ್ರ ,ಸಾಗುವಳಿ ಚೀಟಿ, ಸಾಮಾಜಿಕ ಭದ್ರತಾ ಪಿಂಚಣಿ, ಪ್ರಾಕೃತಿಕ ವಿಕೋಪದ ಚೆಕ್ ಗಳು, ಬಿ.ಪಿ.ಎಲ್ ಪಡಿತರ ಚೀಟಿಯನ್ನು ಜನರ ಕೈಗೆ ಮುಟ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆದರೂ ಕೆಲ ಭಾಗಗಳಲ್ಲಿ ಸಮಸ್ಯೆಗಳು, ದೂರುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಆ ಸಮಸ್ಯೆಗಳನ್ನು ಕೂಡ ಬಗೆಹರಿಸಲಾಗುವುದು ಎಂದು ಶಾಸಕ ಉಮಾನಾಥ್ ಕೋಟ್ಯಾನ್ ತಿಳಿಸಿದರು.

ಅವರು ಶನಿವಾರ ಕನ್ನಡಭವನದಲ್ಲಿ ಆಯೋಜಿಸಲಾದ ಮೂಡುಬಿದಿರೆ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಹಕ್ಕು ಪಕ್ಷ 63 ಫಲಾನುಭವಿಗಳು, ಸಾಗುವಳಿ ಚೀಟಿ 4, ಸಾಮಾಜಿಕ ಭದ್ರತಾ ಪಿಂಚಣಿಯು 150, ಪ್ರಾಕೃತಿಕ ವಿಕೋಪ ಚೆಕ್ ಗಳು 7,ಹಾಗೂ ಬಿ.ಪಿ.ಎಲ್ ಪರಿಸರ ಚೀಟಿಗಳು 220 ಒಟ್ಟು ೪೪೪ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲುಗಳ ಹಕ್ಕು ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪುಟ್ಟುರಾಜು, ಕಂದಾಯ ನಿರೀಕ್ಷಕ ದಿಲೀಪ್ ರೋಡ್ಕರ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ, ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ನೆಲ್ಲಿಕಾರು ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಂತ್ ಹೆಗ್ಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಿರಸ್ತೇದಾರ ರಾಮು ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

30/04/2022 06:03 pm

Cinque Terre

1.45 K

Cinque Terre

0

ಸಂಬಂಧಿತ ಸುದ್ದಿ