ಮುಲ್ಕಿ: ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಿಲ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣೆ ಹಾಗೂ ತರಬೇತಿ ಶಿಬಿರ ಕಿಲ್ಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಲ್ಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ವಹಿಸಿ ಮಾತನಾಡಿ ಸರಕಾರ ಗ್ರಾಮೀಣ ಭಾಗದ ನಾಗರಿಕರಿಗೆ ಅನೇಕ ಸವಲತ್ತುಗಳನ್ನು ಒದಗಿಸುತ್ತಿದ್ದು ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದರು.
ಈ ಸಂದರ್ಭ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ, ಪಂಚಾಯತ್ ಪಿಡಿಒ ಪೂರ್ಣಿಮ, ಕಾರ್ಮಿಕ ಇಲಾಖೆಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಶಿಬಿರ ನಡೆಯಿತು.
Kshetra Samachara
10/05/2022 01:49 pm