ಮಂಗಳೂರು: ನಗರದ ಹೊರವಲಯದ ಕೋಡಿಕಲ್ ನಲ್ಲಿರುವ ಗಣೇಶ ನಗರದ ಶ್ರೀ ಮಹಾಗಣಪತಿ ಭಜನಾ ಮಂದಿರದ 28 ನೇ ವರ್ಷದ ಮೂರ್ತಿ ಪ್ರತಿಷ್ಟಾಪನಾ ದಿನಾಚರಣೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಉಪಸ್ಥಿತರಿದ್ದು ದೇವರ ಫಲಪ್ರಸಾದ ಸ್ವೀಕರಿಸಿದರು.
ಶಾಸಕರು ಹಾಗೂ ಸ್ಥಳೀಯ ಮ.ನಾ.ಪ.ಸದಸ್ಯರುಗಳ ವಿಶೇಷ ಮುತುವರ್ಜಿಯಿಂದ ಸುಮಾರು 16 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಭಜನಾ ಮಂದಿರದ ಗೌರವ ಅಧ್ಯಕ್ಷರಾದ ಪ್ರಕಾಶ್ ಕುಂದರ್, ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
13/05/2022 12:52 pm