ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ರೈತಸಿರಿ ಕಟ್ಟಡ ಉದ್ಘಾಟನೆ

ಮೂಡುಬಿದಿರೆ : ಸಹಕಾರಿ ರಂಗಕ್ಕೆ ಶತಮಾನಗಳ ಇತಿಹಾಸವಿದೆ. ವಾಣಿಜ್ಯ ಬ್ಯಾಂಕ್‌ಗಳ ಹಿನ್ನೆಲೆ ಇತ್ತೀಚಿನದ್ದು. ರಾಷ್ಟ್ರೀಕೃತ ಬ್ಯಾಂಕ್‌ಗಳ ಠೇವಣಿಯ ಹಣವು ಶ್ರೀಮಂತರಿಗೆ ಸಾಲದ ರೂಪದಲ್ಲಿ ನೀಡಲಾಗುತ್ತಿದ್ದರೆ ಸಹಕಾರಿ ಕ್ಷೇತ್ರದಲ್ಲಿ ಇಟ್ಟ ಠೇವಣಿ ಹಣವು ರೈತರಿಗೆ ಸಾಲದ ರೂಪದಲ್ಲಿ ವಿತರಣೆಯಾಗುತ್ತಿದೆ. ರೈತರು ಸಕಾಲದಲ್ಲಿ ಸಾಲಮರುಪಾವತಿಸುವುದರಿಂದ ಸಹಕಾರಿ ಕ್ಷೇತ್ರವೂ ಬಲಿಷ್ಠವಾಗಿದೆ. ರೈತರ ಸಂಕಷ್ಟಗಳಿಗೆ ಸಹಕಾರಿ ಸಂಸ್ಥೆಗಳೂ ಸ್ಪಂದಿಸುತ್ತಿದೆ ಎಂದು ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಮೂಡುಬಿದಿರೆ ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ)ವು ಸುಮಾರು 1.10ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ ನೂತನ ಕಟ್ಟಡ ರೈತ ಸಿರಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿರಿಯ ಸಹಕಾರ ಸಂಸ್ಥೆಯಾಗಿದ್ದು ಈ ಕಟ್ಟಡಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ 10 ಲಕ್ಷ ರೂ ನೆರವು ನೀಡಲಾಗುವುದು. ವಾರದೊಳಗೆ ನವೋದಯ ಸ್ವಸಹಾಯ ಸಂಘದ ಸದಸ್ಯರಿಗೆ ಸೀರೆಯನ್ನು ವಿತರಿಸಲಾಗುವುದು ಎಂದರು.

ಆಶೀರ್ವಚನ ನೀಡಿದ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಕಚೇರಿಯನ್ನು ಉದ್ಘಾಟಿಸಿದರು. ಮಾಜಿ ಶಾಸಕ ಕೆ.ಅಭಯಚಂದ್ರ ಜೈನ್ ಭದ್ರತಾ ಕೊಠಡಿಯನ್ನು, ಜಯಶ್ರೀ ಅಮರನಾಥ ಶೆಟ್ಟಿ ಗೋದಾಮನ್ನು ಉದ್ಘಾಟಿಸಿ ಮಾತನಾಡಿದರು.

ಪುತ್ತಿಗೆ ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪಾಲಡ್ಕ ಗ್ರಾ.ಪಂ. ಅಧ್ಯಕ್ಷ ದಿನೇಶ್ ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕ ಭಾಸ್ಕರ ಎಸ್ ಕೋಟ್ಯಾನ್, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಸಹಕಾರಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ , ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ, ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉಮೇಶ್ ಅಡಿಗಳ್, ಉದ್ಯಮಿ ಮಿತ್ತಬೈಲು ಎಂ.ಗೋವರ್ಧನ್ ನಾಯಕ್, ಸುದರ್ಶನ್ ಶೆಟ್ಟಿ ಉಪಸ್ಥಿತರಿದ್ದರು.

2 ಹೊಸ ನವೋದಯ ಸ್ವಸಹಾಯ ಗುಂಪುಗಳಿಗೆ ದಾಖಲೆ ಪತ್ರಗಳನ್ನು ಹಸ್ತಾಂತರಿಸಲಾಯಿತು. ಕಟ್ಟಡದ ಸ್ಥಳ ದಾನಿ ದಿನೇಶ್ ಕುಮಾರ್ ಆನಡ್ಕ ಹಾಗೂ ಪುತ್ತಿಗೆ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತರಾದ ಕೆ. ನಾಗರಾಜ ಭಟ್, ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಪಿ.ಸುಚರಿತ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಹಾಗೂ ಕಟ್ಟಡದ ನಿರ್ಮಾಣದ ಗುತ್ತಿಗೆದಾರರು ಹಾಗೂ ಸಹಕಾರ ನೀಡಿದವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ನಿರ್ದೇಶಕರಾದ ಕೆ.ಪಿ.ಸುಚರಿತ ಶೆಟ್ಟಿ, ನಾರಾಯಣ ಮಡಿವಾಳ, ಕೆ.ಬಿ.ಶಿವದತ್ತ, ವಿಠಲ ನಾಯಕ, ಪೌಲ್ ಡಿಸೋಜ, ಸುಕೇಶ್ ಪೂಜಾರಿ, ಸಂದೀಪ್ ಪೂಜಾರಿ, ನೀರಜಾಕ್ಷಿ ಶೆಟ್ಟಿ, ಹೆಲೆನ್ ಡಿಸೋಜ, ಎಸ್‌ಸಿಡಿಸಿಸಿಯ ವಲಯ ಮೇಲ್ವಿಚಾರಕ ಸಂಜಯ್ ಉಪಸ್ಥಿತರಿದ್ದರು.

ಸುಚರಿತ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತೃಪ್ತಿ ವಂದಿಸಿದರು. ಸುಹಾಸ್ ಶೆಟ್ಟಿ ಕಾರ‍್ಯಕ್ರಮ ನಿರ್ವಹಿಸಿದರು.

Edited By : PublicNext Desk
Kshetra Samachara

Kshetra Samachara

13/05/2022 06:11 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ