ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಪುನರೂರು ಕುಕ್ಕುದಕಟ್ಟೆ ಬಳಿ ಭಾರಿ ಗಾತ್ರದ ಅಕೇಶಿಯಾ ಮರ ರಾಜ್ಯ ಹೆದ್ದಾರಿಗೆ ಬಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಹಕೀಂ ಹಾಗೂ ಅಂಗರಗುಡ್ಡೆ ಯುವಕರು ಮತ್ತು ಕಿನ್ನಿಗೋಳಿಯ ಮೆಸ್ಕಾಂ ಅಧಿಕಾರಿಗಳು ಮರವನ್ನು ತೆರವುಗೊಳಿಸಿದ್ದಾರೆ.
ಹೆದ್ದಾರಿಗೆ ಮರ ಬಿದ್ದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ವಾಹನಗಳು ಕೆರೆಕಾಡು ಒಳ ರಸ್ತೆಯ ಮೂಲಕ ಪ್ರಯಾಣ ಬೆಳೆಸಿದವು. ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ಬದಿಯಲ್ಲಿ ಅನೇಕ ಅಪಾಯಕಾರಿ ಮರಗಳಿದ್ದು ಮಳೆಗಾಲದಲ್ಲಿ ಅಪಾಯ ಸಂಭವಿಸುವ ಮೊದಲೇ ತೆರವುಗೊಳಿಸಬೇಕು ಹಾಗೂ ಹೆದ್ದಾರಿ ಬದಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
Kshetra Samachara
20/05/2022 08:50 pm