ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು.
ದೇವಸ್ಥಾನದ ಅರ್ಚಕ ನರಸಿಂಹ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಕರುಣಾಕರ ಶೆಟ್ಟಿ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಸಿಬ್ಬಂದಿ ಶಿವಶಂಕರ್, ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಪ್ರತಾಪ್ ಸಿಂಹ ದೇವಸ್ಥಾನದಲ್ಲಿ ಮಧ್ಯಾಹ್ನದ ಭೋಜನವನ್ನು ಸವಿದರು.
Kshetra Samachara
28/05/2022 03:28 pm