ಮೂಡಬಿದ್ರೆ: ಭಾರತದ ಪ್ರಧಾನಿ ನರೇಂದ್ರ ಮೋದಿ ರವರ ಸರ್ಕಾರ 8 ವರ್ಷ ಪೂರ್ಣಗೊಳಿಸಿರುವ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ "ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ" ಕಾರ್ಯಕ್ರಮದ ಅಂಗವಾಗಿ ಕೆಸರುಗದ್ದೆಯ ಸುನಂದಾ ಮಾಧವ ಪ್ರಭು ಸಭಾಭವನದಲ್ಲಿ ನಡೆದ ರೈತರು ಮತ್ತು ಸಾರ್ವಜನಿಕರೊಂದಿಗಿನ "ಸಂವಾದ ಕಾರ್ಯಕ್ರಮ"ವನ್ನು ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿ ಕೇಂದ್ರದ ಮೋದೀಜಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದರು.
ಈ ಸಂಧರ್ಭ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೇಳೂರು,ಮಂಡಲದ ರೈತ ಮೋರ್ಚಾ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಪಕ್ಷದ ವಿವಿಧ ಪದಾಧಿಕಾರಿಗಳು, ಜನಪ್ರತಿನಿಧಿಗಳು, ರೈತರು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
04/06/2022 12:41 pm