ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿವಿ ಘಟಕ ಮತ್ತು ಪ್ರಥಮ ದರ್ಜೆ ಕಾಲೇಜು ಘಟಕದ ಸಹಯೋಗದೊಂದಿಗೆ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ವಿಶೇಷ ಗಿಡಗಳ ತೋಟ ಹಾಗೂ ಫಲವಸ್ತು ಗಿಡಗಳ ಗಾರ್ಡನನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಆದ್ಯತೆಯಾಗಬೇಕಿದೆ. ಮಂಗಳೂರು ವಿಶ್ವವಿದ್ಯಾಲಯವು ಪರಿಸರ ಸಂರಕ್ಷಣೆಯ ಕಾಳಜಿಯೊಂದಿಗೆ ಹಲವಾರು ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿದೆ. ಮಂಗಳೂರು ವಿವಿ ಕ್ಯಾಂಪಸ್ ನಲ್ಲಿ ಗ್ರೀನ್ ಸರ್ವೇ ಮೂಲಕ ಪ್ರತೀ ಗಿಡಮರಗಳನ್ನು ಗುರುತಿಸಿ, ನಾಮಫಲಕ ಅಳವಡಿಸಿ ಸಂರಕ್ಷಿಸುವ ಕಾರ್ಯ ಆಗಲಿದೆ. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ದೇಶದ ವಿಶ್ವವಿದ್ಯಾಲಯಗಳ ಪೈಕಿ ಮಂಗಳೂರು ವಿವಿಯು ಹಸಿರು ಕ್ಯಾಂಪಸ್ ಆಗಿ ಗುರುತಿಸಲ್ಪಟ್ಟಿದೆ. ಒಂದು ವಿದ್ಯಾರ್ಥಿ ಒಂದು ಗಿಡ ಎಂಬ ಪರಿಕಲ್ಪನೆಯಲ್ಲಿ ಗಿಡ ಮರಗಳನ್ನು ಬೆಳೆಸಿ ಸಂರಕ್ಷಿಸಲಾಗುತ್ತಿದ್ದು, ಪ್ರತಿಯೊಬ್ಬರಲ್ಲೂ ಪರಿಸರ ಪರ ಕಾಳಜಿಯನ್ನು ಬೆಳೆಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
Kshetra Samachara
04/06/2022 09:26 pm