ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತಿಗೆ:ರೈತರು ಮತ್ತು ಸಾರ್ವಜನಿಕರೊಂದಿಗಿನ ಸಂವಾದ; ಸಾಧಕ ವಿದ್ಯಾರ್ಥಿಗೆ ಗೌರವ

ಮೂಡಬಿದ್ರೆ: ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರ್ಣಗೊಳಿಸಿರುವ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ "ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ" ಕಾರ್ಯಕ್ರಮದ ಅಂಗವಾಗಿ ಪುತ್ತಿಗೆ ಪಂಚಾಯತ್ ಸಭಾಂಗಣದಲ್ಲಿ ನಡೆದ ರೈತರು ಮತ್ತು ಸಾರ್ವಜನಿಕರೊಂದಿಗಿನ ಸಂವಾದ ಕಾರ್ಯಕ್ರಮ"ದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ ಕೇಂದ್ರದ ಮೋದೀಜಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದರು.

ಈ ಸಂಧರ್ಭ ಎಸೆಸೆಲ್ಸಿ ಪರೀಕ್ಷೆಯಲ್ಲಿ 625/625 ಅಂಕ ಪಡೆದ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಶ್ರೀಜಾ ಹೆಬ್ಬಾರ್ ರವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ,ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ,ರೈತ ಮೋರ್ಚಾ ಮಂಡಲಧ್ಯಕ್ಷ ಸೋಮನಾಥ್ ಕೋಟ್ಯಾನ್, ವಿನೋದ್ ಸಾಲ್ಯಾನ್ ಬೆಳ್ಳಾಯರು,ಪಕ್ಷದ ವಿವಿಧ ಜವಾಬ್ದಾರಿ ಇರುವ ಪ್ರಮುಖರು, ಜನಪ್ರತಿನಿಧಿಗಳು,ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/06/2022 06:38 pm

Cinque Terre

1.88 K

Cinque Terre

0

ಸಂಬಂಧಿತ ಸುದ್ದಿ