ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ:"ಪೌಷ್ಟಿಕ ಆಹಾರ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯ"

ಮೂಡುಬಿದಿರೆ: ಪೌಷ್ಟಿಕ ಆಹಾರ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯ ಎಂದು ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕಿ ಡಾ||ಸ್ಮಿತಾ ಭಟ್ ಹೇಳಿದರು.

ಅವರು ಮೂಡಬಿದ್ರೆಯ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಪೌಷ್ಟಿಕ ಆಹಾರ ದಿನಾಚರಣೆಯ ಅಂಗವಾಗಿ ಆಯೋಜಿಸಿದ 'ಆಹಾರ ಸುರಕ್ಷತೆ' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಇಂದಿನ ಬದಲಾಗುತ್ತಿರುವ ಹವಾಮಾನದಲ್ಲಿ ವ್ಯಕ್ತಿಯೊಬ್ಬ ಸೇವಿಸುವ ಆಹಾರವೂ ಕೂಡ ಆತನ ಅರೋಗ್ಯವನ್ನು ನಿರ್ಧರಿಸುವ ಬಹುಮುಖ್ಯ ಅಂಶವಾಗಿದೆ. ಆದ್ದರಿಂದ ನಾವು ಸೇವಿಸುವ ಆಹಾರದಲ್ಲಿ ಲಭ್ಯವಿರುವ ಪೋಷಕಾಂಶಗಳು, ವಿಟಮಿನ್ ಮತ್ತು ಕಾರ್ಬೋಹೈಡ್ರೆಟ್ ಇತ್ಯಾದಿಗಳ ಬಗ್ಗೆ ನಮಗೆ ತಿಳಿದಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಕು.ಮೌಲ್ಯ ವೈ ಆರ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಕು. ಅಕ್ಷರ ಧನ್ಯವಾದ ಅರ್ಪಿಸಿದರು.

Edited By : PublicNext Desk
Kshetra Samachara

Kshetra Samachara

08/06/2022 09:04 am

Cinque Terre

788

Cinque Terre

0

ಸಂಬಂಧಿತ ಸುದ್ದಿ