ಮುಲ್ಕಿ: ಮುಲ್ಕಿಯಲ್ಲಿ 10 ಕೋಟಿ ವೆಚ್ಚದಲ್ಲಿ ಶೀಘ್ರ ತಾಲೂಕು ಆಡಳಿತ ಸೌಧ ಹಾಗೂ 2 ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರ ನಿರ್ಮಾಣವಾಗಲಿದ್ದು ಮುಲ್ಕಿ ತಾಲೂಕು ರಚನೆ ಮೂಲಕ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಮುಲ್ಕಿ ನಗರ ಪಂಚಾಯಿತಿಯಲ್ಲಿ ಇ-ಸ್ವೀಕೃತಿ ಬಿಡುಗಡೆ ಹಾಗೂ ಫಲಾನುಭವಿಗಳಿಗೆ ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ ಇ-ಸ್ವೀಕೃತಿ ಮೂಲಕ ನಗರ ಪಂಚಾಯಿತಿ ವ್ಯಾಪ್ತಿಯ ಜನರು ಮನೆಯಲ್ಲೇ ಕುಳಿತು ನಗರ ಪಂಚಾಯತ್ ತೆರಿಗೆ ಪಾವತಿ ಮತ್ತಿತರ ದೂರು ದುಮ್ಮಾನಗಳನ್ನು ನೀಡಬಹುದು ಎಂದರು.
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ನಗರ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಪುತ್ತು ಭಾವ, ಹರ್ಷರಾಜ ಶೆಟ್ಟಿ, ಶೈಲೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/06/2022 09:22 am