ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ವ, ಕೊಲಕಾಡಿ ಹಾಗೂ ಶಿಮಂತೂರು ಗ್ರಾಮದ ಆಯ್ದ ರಸ್ತೆಗಳಿಗೆ ಸುಮಾರು 22 ಲಕ್ಷ ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡಿದ್ದು ಉದ್ಘಾಟನೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಸರಕಾರ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದರು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/06/2022 10:14 am