ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅನಿವಾರ್ಯ"

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ"( ಜೂ. 21) ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ ಜಿಲ್ಲಾ ಗೃಹರಕ್ಷಕ ದಳದ ಶಿಬಿರ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರ ನೇತೃತ್ವದಲ್ಲಿ ಗುರುವಾರ ನಗರದ ಮೇರಿಹಿಲ್ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಖ್ಯಾತ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಮತ್ತು ಯೋಗ ಶಿಕ್ಷಕಿ ಸುಮಾ ರವರ ಮಾರ್ಗದರ್ಶನದಲ್ಲಿ ನಡೆಯಿತು.

ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಅರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗೋಪಾಲಕೃಷ್ಣ ದೇಲಂಪಾಡಿ ಕರೆ ನೀಡಿದರು.

ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅನಿವಾರ್ಯ ಎಂದರು ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.

Edited By : PublicNext Desk
Kshetra Samachara

Kshetra Samachara

16/06/2022 07:46 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ