ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿ ಬೆಟ್ಟು:ಯೋಗದ ಮೂಲಕ ಉತ್ತಮ ಸಂಸ್ಕಾರ ಹಾಗೂ ಸಂಸ್ಕೃತಿ ಮೂಡಿಸಲು ಸಾಧ್ಯ"

ಮುಲ್ಕಿ:ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಯೋಗ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಿರಿಧರ್ ಕಾಮತ್ ಉದ್ಘಾಟಿಸಿದರು, ಜಯಕುಮಾರ್ ಕುಬೆವೂರು ಗುರುಗಳಾಗಿ ಶಿಬಿರವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಯೋಗದ ಮೂಲಕ ಆರೋಗ್ಯ ವೃದ್ದಿಯಾಗುವುದಲ್ಲದೆ ಉತ್ತಮ ಸಂಸ್ಕಾರ ಹಾಗೂ ಸಂಸ್ಕೃತಿ ಮೂಡಿಸಲು ಸಾಧ್ಯ ಎಂದರು.

ಉಪಾಧ್ಯಕ್ಷೆ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ಕಾರ್ಯದರ್ಶಿ ಯೋಗೀಶ್, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/06/2022 03:30 pm

Cinque Terre

1.41 K

Cinque Terre

0

ಸಂಬಂಧಿತ ಸುದ್ದಿ