ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ಪಿಎಲ್ ನಲ್ಲಿ ಕರ್ತವ್ಯ ನಿರತರಾಗಿದ್ದಾಗ ಅಪಘಾತಕ್ಕೆ ಬಲಿಯಾದ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ರವರ ಮನೆಗೆ ವಿವಿಧ ಸಂಘಟನೆಗಳ ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿ ಕಂಪನಿಯವರು ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಲು ಆಗ್ರಹಿಸಿದರು.
ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ, ಜಯ ಕರ್ನಾಟಕ ಸಂಘಟನೆಯ ಉದ್ಯಮಿ ವೈ ರಾಘವೇಂದ್ರ ರಾವ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಡಿವೈಎಫ್ಐ ಸಂಘಟನೆಯ ಮುಖಂಡರಾದ ಶ್ರೀನಾಥ್ ಕುಲಾಲ್, ಮಕ್ಸೂದ್ ಬಿ ಕೆ, ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ಪೂಜಾರಿ ಕುಳಾಯಿ, ಆನಂದ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
25/06/2022 07:59 am