ಮುಲ್ಕಿ: ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕೊಲ್ನಾಡ್ ನಿಂದ ಕೆಎಸ್ ರಾವ್ ನಗರದ ವಿದ್ಯುತ್ ಉಪ ಕೇಂದ್ರಕ್ಕೆ ಹೋಗುವ ಪ್ರದಾನ ರಸ್ತೆ ಬದಿಯಲ್ಲಿ ಕೆಲ ದುಷ್ಕರ್ಮಿಗಳು ತ್ಯಾಜ್ಯ ಬಿಸಾಡುತ್ತಿದ್ದು ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದೆ.
ಈ ರಸ್ತೆ ಇನ್ನೊಂದು ಪಾರ್ಶ್ವ ದಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ತ್ಯಾಜ್ಯ ಬಿಸಾಡುತ್ತಿದ್ದು ಸಿಸಿ ಕ್ಯಾಮೆರಾ ಅಳವಡಿಕೆಯಿಂದ ನಿಯಂತ್ರಣಕ್ಕೆ ಬಂದಿತ್ತು. ಆದರೆ ದುಷ್ಕರ್ಮಿಗಳು ಈಗ ರಸ್ತೆ ಇನ್ನೊಂದು ಬದಿಯಲ್ಲಿರುವ ಪಡುಪಣಂಬೂರು ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ಗೇಟ್ ವಾಲ್ವ್ ಬಳಿ ತ್ಯಾಜ್ಯ ಬಿಸಾಡುತ್ತಿದ್ದಾರೆ.
ಈ ಬಗ್ಗೆ ಸ್ಥಳೀಯ ಗ್ರಾಪಂ ಸದಸ್ಯ ಹರಿಪ್ರಸಾದ್ ಮಾತನಾಡಿ ದುಷ್ಕರ್ಮಿಗಳು ತ್ಯಾಜ್ಯ ಬಿಸಾಡುವ ಬಗ್ಗೆ ಪಂಚಾಯಿತಿಗೆ ದೂರು ನೀಡಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
Kshetra Samachara
30/06/2022 07:24 pm