ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ:ಪತ್ರಕರ್ತರ ಸಂಘದ ನೂತನ ಕಚೇರಿ, ಸಭಾಭವನ ನಿರ್ಮಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗು ಸಭಾಭವನ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು

ಶಾಸಕ ಉಮನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಪತ್ರಕರ್ತರು ಕುಂದು ಕೊರತೆಗಳನ್ನು ತಿಳಿಸಿ ಸರಿಪಡಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗುತ್ತಿರುವುದು ಶ್ಲಾಘನೀಯ ಎಂದರು.

ಪತ್ರಿಕಾ ದಿನಾಚರಣೆಯ ಅಂಗವಾಗಿ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆದ "ಮಾಧ್ಯಮ ಹಬ್ಬ -2022" ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಗೌರವ ಸಂಮಾನವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ ಅಭಯ ಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್, ಜಿತೇಂದ್ರ ಕುಂದೇಶ್ವರ, ವೇಣುಗೋಪಾಲ್ ಹಾಗು ಸರ್ವ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/07/2022 03:04 pm

Cinque Terre

1.6 K

Cinque Terre

0

ಸಂಬಂಧಿತ ಸುದ್ದಿ