ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಬೀದಿ ಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ

ಮುಲ್ಕಿ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೌಶಲ್ಯಾಭಿವೃದ್ಧಿ ಕಚೇರಿ, ಜಿಲ್ಲಾ ಕೌಶಲ್ಯಾ ಮಿಷನ್ ಮಂಗಳೂರು ಮತ್ತು ಮುಲ್ಕಿ ನಗರ ಪಂಚಾಯತ್ ಸಹಯೋಗದಲ್ಲಿ ದೀನ್ ದಯಾಳ್ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ- ನಲ್ಮ್), ಬೀದಿ ಬದಿ ವ್ಯಾಪಾರಿಗಳ ಬೆಂಬಲ ಉಪಘಟಕದಡಿ ಬೀದಿಬದಿ ವ್ಯಾಪಾರಿಗಳಿಗೆ ಅಧಿನಿಯಮ ಮತ್ತು ಯೋಜನೆಗಳ ಕುರಿತು ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಶ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಲ್ಕಿ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಕ್ಬರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಭಿಯಾನದ ವ್ಯವಸ್ಥಾಪಕರಾದ ಐರಿನ್ ರೆಬೆಲ್ಲೋ, ಆರ್ಥಿಕ ಸಾಕ್ಷರತಾ ಕೇಂದ್ರದ ಲತೇಶ್ ಮತ್ತಿತರರು ಉಪಸ್ಥಿತರಿದ್ದರು. ಸಮುದಾಯ ಸಂಘಟಕಿ ಭರತಾಂಜಲಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬೀದಿ ಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ನಡೆಯಿತು.

Edited By : PublicNext Desk
Kshetra Samachara

Kshetra Samachara

05/07/2022 01:00 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ