ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಎಸ್. ಕೋಡಿ ಬಳಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಹೆದ್ದಾರಿ ಬದಿಯಲ್ಲಿ ಮಳೆ ನೀರು ನಿಂತು ಅಪಾಯಕಾರಿಯಾಗಿ ಪರಿಣಮಿಸಿದೆ.
ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಸಮಸ್ಯೆ ಎದುರಾಗಿದ್ದು ಲೋಕೋಪಯೋಗಿ ಇಲಾಖೆ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿಯಲ್ಲಿ ಸಾಗುತ್ತಿರುವ ಭಾರೀ ಗಾತ್ರದ ವಾಹನಗಳಿಂದ ನಡೆದುಕೊಂಡು ಹೋಗುತ್ತಿರುವ ಪಾದಚಾರಿಗಳಿಗೆ ಪುಕ್ಕಟೆ ಕೆಸರು ನೀರಿನ ಸಿಂಚನವಾಗುತ್ತಿದ್ದು ಸಂಬಂಧಪಟ್ಟವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕೂಡಲೆ ಲೋಕೋಪಯೋಗಿ ಇಲಾಖೆ ಎಚ್ಚೆತ್ತು ರಾಜ್ಯ ಹೆದ್ದಾರಿ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯ ನಾಗರೀಕರು ಆಗ್ರಹಿಸಿದ್ದಾರೆ.
Kshetra Samachara
06/07/2022 05:39 pm