ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದೆ ಹೆದ್ದಾರಿಯಲ್ಲಿ ಅಪಾಯಕಾರಿ ಹೊಂಡಗಳು ಉಂಟಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ.
ರಾಜ್ಯ ಹೆದ್ದಾರಿಯ ಕೆಂಚನಕೆರೆ, ಪದ್ಮನೂರು, ಕಾರ್ನಾಡು, ಗೇರುಕಟ್ಟೆ ಕಡೆಗಳಲ್ಲಿ ಬೃಹದಾಕಾರದ ಹೊಂಡಗಳು ಉಂಟಾಗಿದ್ದು ಪದ್ಮನೂರು ಬಳಿ ನಾಗರಿಕರು ಗಿಡ ನೆಟ್ಟು ಪ್ರತಿಭಟನೆ ನಡೆಸಿದ್ದಾರೆ.
ಲೋಕೋಪಯೋಗಿ ಇಲಾಖೆ ನಿರ್ಲಕ್ಷದಿಂದ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದೆ ಡಾಮರೀಕರಣ ನಾಶವಾಗುತ್ತಿದೆ ಎಂದು ನಾಗರಿಕರು ಆರೋಪಿಸಿದ್ದು ಇಲಾಖೆ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
Kshetra Samachara
06/07/2022 05:51 pm