ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ರಾಜ್ಯಸಭೆಗೆ ಹೆಗ್ಗಡೆ; ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ

ಮುಲ್ಕಿ: ಭಾರತ ಸರಕಾರವು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವುದಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ, ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಡಾ. ವಿರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅವರು ಮುಲ್ಕಿಯ ತಮ್ಮ ಆಶ್ರಮದಲ್ಲಿ ಮಾಧ್ಯಮದವರೊಡನೆ ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿಶ್ವದ ಶ್ರೇಷ್ಠ ನಾಯಕರಾಗಿದ್ದು 1982ರಲ್ಲಿ ಅವರು ಪ್ರಾರಂಭಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕದ ಗ್ರಾಮೀಣ ಪ್ರದೇಶದ ಜನರ ಬದುಕಿನಲ್ಲಿ ದೊಡ್ಡ ಬದಲಾವಣೆಗಳನ್ನು ತಂದಿತ್ತು, ಹೆಗ್ಗಡೆಯವರ ಕನಸಿನ ಮತ್ತೊಂದು ಯೋಜನೆಯಾಗಿದೆ ರುಡ್ ಸೆಟ್ ಸಂಸ್ಥೆ,ಯುವಕರನ್ನು ಉದ್ಯೋಗಿಗಳಾಗಿಸುವ ಕನಸಿನೊಂದಿಗೆ ಯೋಜನೆ ದೇಶಾದ್ಯಂತ ವಿಸ್ತಾರಗೊಂಡು ನಿರುದ್ಯೋಗಿಗಳ ಪಾಲಿಗೆ ಆಶಾಕಿರಣವಾಗಿ ಮೂಡಿಸಿದೆ, ಸಾಮೂಹಿಕ ವಿವಾಹ ,ಕೆರೆಗಳ ಹೂಳೆತ್ತುವಿಕೆ ಅರಣ್ಯ ಸಂರಕ್ಷಣೆ, ಶುದ್ಧ ಕುಡಿಯುವ ನೀರು, ದುಶ್ಚಟ ಮುಕ್ತಿ ಹೀಗೆ ಹಲವಾರು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು ಶಿಕ್ಷಣ ಸಂಸ್ಥೆಗಳ, ಆರೋಗ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಅದ್ಭುತವಾಗಿದ್ದು ಸಾಧನೆಗೆ ರಾಜ್ಯಸಭಾ ಸದಸ್ಯತ್ವ ಒಲಿದು ಬಂದಿದೆ. ಅವರ ಜೊತೆ ರಾಜ್ಯಸಭಾ ಸದಸ್ಯತ್ವ ಪಡೆದ ವಿವಿಧ ಕ್ಷೇತ್ರದ ಸಾಧಕರಾದ ಇಳೆಯರಾಜ ,ಪಿಟಿ ಉಷಾ, ವಿ ವಿಜಯೇಂದ್ರ ಪ್ರಸಾದ್ ರವರಿಗೂ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕೆಲಸವನ್ನು ಮಾಡುವಂತೆ ಪ್ರೇರೇಪಿಸಲು ಅನುವು ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ರವರಿಗೆ ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಮುಖೇನ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್, ಸಂಚಾಲಕ ಪುನೀತ್ ಕೃಷ್ಣ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/07/2022 09:30 am

Cinque Terre

982

Cinque Terre

0

ಸಂಬಂಧಿತ ಸುದ್ದಿ