ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಗರಗುಡ್ಡೆ: ಚರಂಡಿ ಅವ್ಯವಸ್ಥೆ ಮಳೆಯ ಕೆಸರು ನೀರು ಹೆದ್ದಾರಿಗೆ!!

ಮುಲ್ಕಿ; ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಅಂಗರಗುಡ್ಡೆ ಪುನರೂರು ಬಳಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಸೈಟ್ ಹಾಗೂ ಹೆದ್ದಾರಿ ಬದಿಯ ಮನೆಯ ಆವರಣದಿಂದ ಹೆದ್ದಾರಿಗೆ ಕೆಸರು ನೀರು ಬರುತ್ತಿದ್ದು ಅವ್ಯವಸ್ಥೆಗಳ ಆಗರವಾಗಿದೆ.

ಪ್ರತಿ ಮಳೆಗಾಲದಲ್ಲಿ ಈ ಭಾಗದಲ್ಲಿಹೆದ್ದಾರಿಯಲ್ಲಿ ಕೆಸರು ನೀರಿನ ವಾತಾವರಣ ಸೃಷ್ಟಿಯಾಗುತ್ತಿದ್ದು ಕೂಡಲೇ ಕಿಲ್ಪಾಡಿ ಪಂಚಾಯತ್ ಈ ಬಗ್ಗೆ ಗಮನ ಹರಿಸಿ ಮನೆಯವರಿಗೆ ಹಾಗೂ ಸೈಟ್ ಮಾಲೀಕರಿಗೆ ಸೂಚನೆ ನೀಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

11/07/2022 05:38 pm

Cinque Terre

2.05 K

Cinque Terre

0

ಸಂಬಂಧಿತ ಸುದ್ದಿ