ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ 10 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ನಿರಂತರ ಮಳೆಯಿಂದಾಗಿ ಮಳಲಿ ನಾಡಾಜೆ ಎಂಬಲ್ಲಿ ಹಂಝ ಎಂಬವರ ಮನೆ ಕುಸಿದು ಬಿದ್ದಿದ್ದು ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ಮಾಹಿತಿ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮಾತ್ರವಲ್ಲ ಮನೆ ರಿಪೇರಿ ಕಾಮಗಾರಿಯ ಸಂಪೂರ್ಣ ಖರ್ಚು ವೆಚ್ಚ ಭರಿಸುವ ಭರವಸೆಯನ್ನೂ ನೀಡಿದರು.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಇನಾಯತ್ ಆಲಿ, ಮಳೆಯಿಂದಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕರು ಸಂಕಷ್ಟದಲ್ಲಿದ್ದು ಸಹಾಯ ಹಸ್ತ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಜೊತೆಗೆ ನೆರೆಯಿಂದಾಗಿ ಸಂಕಷ್ಟದಲ್ಲಿರುವವರಿಗೆ ಪರಿಹಾರ ನೀಡಲಾಗುವುದು ಎಂದರು.
Kshetra Samachara
12/07/2022 08:42 pm