ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಗ್ರಾಮಸ್ಥರ ಸಮಸ್ಯೆಗೆ ಸ್ಪಂದನೆ

ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್‍ ವ್ಯಾಪ್ತಿಯ ಕದಿಕೆಯಿಂದ ಸಸಿಹಿತ್ಲುವಿಗೆ ಹಾದು ಹೋಗುವ ರಸ್ತೆಯಲ್ಲಿ ಚರಂಡಿಗೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದೆ ಕೆಲ ದಿನಗಳಿಂದ ಸುರಿದ ಮಳೆಯ ನೀರು ನಿಂತು ವಾಹನಗಳು ಮತ್ತು ಜನರು ಸಂಚರಿಸಲಾಗದೇ ಪರದಾಡುವಂತಾಗಿತ್ತು.

ಈ ಬಗ್ಗೆ ಗ್ರಾಮಸ್ಥರು ಹಳೆಯಂಗಡಿ ಗ್ರಾಮ ಪಂಚಾಯತ್‍ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಕೂಡಲೇ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಅಶೋಕ್ ಬಂಗೇರ, ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ಹಾಗೂ ಸದಸ್ಯರುಗಳಾದ ಸತೀಶ್ ಕೊಳುವೈಲು ಮತ್ತು ವಿನೋದ್ ಕುಮಾರ್ ಕೊಳುವೈಲು ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಆಗಮಿಸಿ ಜೆಸಿಬಿ ಮೂಲಕ ರಸ್ತೆಯನ್ನು ಅಗೆದು ಸಿಮೆಂಟ್‍ ಪೈಪುಗಳನ್ನು ಅಳವಡಿಸಿ ಸರಳವಾಗಿ ನೀರು ಚರಂಡಿಗೆ ಹರಿದು ಹೋಗುವಂತೆ ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ

Edited By : PublicNext Desk
Kshetra Samachara

Kshetra Samachara

14/07/2022 11:07 am

Cinque Terre

2.38 K

Cinque Terre

0

ಸಂಬಂಧಿತ ಸುದ್ದಿ