ಮಂಗಳೂರು: ಜನ ಸಮುದಾಯದ ಅಭಿವೃದ್ಧಿಗೆ ಎಲ್ಲಾ ವರ್ಗದ ಜನರ ಸಾಮೂಹಿಕ ಪಾಲ್ಗೊಳ್ಳುವಿಕೆ ಅಗತ್ಯ ವಿದೆ, ಸಂವಿಧಾನದ ಮೂರು ಅಂಗಗಳ ಜೊತೆ ಪತ್ರಕರ್ತರು ಗ್ರಾಮಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವುದು ಒಂದು ಮಾದರಿಯಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ಯಾಂಕ್ ಆಫ್ ಬರೋಡ ಪ್ರಾಯೋಜಕತ್ವದಲ್ಲಿ ಪತ್ರಿಕಾ ಭವನದಲ್ಲಿಂದು ಹಮ್ಮಿಕೊಂಡಿದ್ದ ಪತ್ರಕರ್ತರ ಗ್ರಾಮ ವಾಸ್ತವ್ಯದ ಕುತ್ಲೂರು ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯ ಕ್ರಮವನ್ನುದ್ದೇಶಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಕೊರತೆಗಳಿದ್ದರೂ ಅಲ್ಲಿನ ಸಂಘ ಸಂಸ್ಥೆಗಳು, ಪತ್ರ ಕರ್ತರು,ಜನರು ತಮ್ಮನ್ನು ತೊಡಗಿಸಿಕೊಂಡು ಸಮಸ್ಯೆ ನಿವಾರಣೆಗೆ ಸರಕಾರಿ ಸಂಸ್ಥೆ ಗಳ ಜೊತೆ ಕೈ ಜೋಡಿಸುವ ಮೂಲಕ ಉತ್ತಮ ಪ್ರಯತ್ನ ನಡೆದಿದೆ. ಇದರಿಂದ ಕುತ್ಲೂರಿನಂತಹ ಪ್ರದೇಶದಲ್ಲಿ ಶಾಲಾ ಮಕ್ಕಳ ಹಾಜರಾತಿ ಹೆಚ್ಚು ಆಗಿರುವುದು ಒಂದು ಮಹತ್ವದ ಬೆಳವಣಿಗೆ ಇದಕ್ಕಾಗಿ ಶ್ರಮಿಸಿದ ಎಲ್ಲರನ್ನೂ ತಾನು ಅಭಿನಂದಿಸುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದ ಮುಖ್ಯಸ್ಥರಾದ ಗಾಯತ್ರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಮವಸ್ತ್ರ ನೀಡಲು ಸಂತೋಷ ಪಡುತ್ತೇವೆ. ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಇನ್ನು ಮುಂದೆಯೂ ಬ್ಯಾಂಕ್ ಸಹಕಾರ ನೀಡಲಿದೆ ಎಂದರು. ರೆಡ್ ಕ್ರಾಸ್ ಸೊಸೈಟಿ ಅಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚಯೆರ್‌ಮೆನ್ ಶಾಂತಾರಾಮ ಶೆಟ್ಟಿ ,ಬ್ಯಾಂಕ್ ಆಫ್ ಬರೋಡಾದ ರೀಜನಲ್ ಮುಖ್ಯಸ್ಥರಾದ ಸಂಜಯ್ ವಾಲಿ, ಮಲ್ಲಿಕಟ್ಟೆ ಶಾಖಾ ಪ್ರಧಾನ ಪ್ರಬಂಧಕ ಸತೀಶ್ ಪಾಟ್ಕರ್ ,ಕುತ್ಲೂರು ಸರಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಭಟ್ ಅತಿಥಿ ಗಳಾಗಿ ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.
ಇದೇ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯ ಬರೋಡಾ ಇದರ ಸಿಎಸ್ ಆರ್ ನಿಧಿಯಿಂದ ಕೂತ್ಲುರು ಸರಕಾರಿ ಶಾಲೆಯ 98 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾ ಯಿತು. (2018 ಡಿಸೆಂಬರ್ 23 ರಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಾಗಿತ್ತು )ಗಾಂಧಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮಾಸ್ಕ್ ವಿತರಿಸಲಾಯಿತು.
Kshetra Samachara
20/07/2022 06:35 pm