ಮುಲ್ಕಿ: ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಕಳೆದ ಕೆಲ ದಿನಗಳ ಹಿಂದೆ ಭಾರಿ ಮಳೆಗೆ ಹೆದ್ದಾರಿಗೆ ಮರ ಬಿದ್ದಿದ್ದು ಸ್ಥಳೀಯರು ಮರವನ್ನು ಕತ್ತರಿಸಿ ತೆರವುಗೊಳಿಸಿದ್ದರು.
ಆದರೆ ಕತ್ತರಿಸಿದ ಮರದ ತುಂಡುಗಳು ಹೆದ್ದಾರಿ ಬದಿಯಲ್ಲಿ ಬಿದ್ದುಕೊಂಡಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಇದೇ ರೀತಿ ರಾಜ್ಯ ಹೆದ್ದಾರಿಯ ಹೊಸ ಕಾವೇರಿ ಬಳಿ ಕೂಡ ಭಾರಿ ಗಾತ್ರದ ಬಂಡೆ ಕಲ್ಲು ಹಾಗೂ ಕತ್ತರಿಸಿದ ಮರ ಬಿದ್ದುಕೊಂಡಿದೆ.
ರಾಜ್ಯ ಹೆದ್ದಾರಿಯಲ್ಲಿ ಅನೇಕ ಮರಗಳು ಅಪಾಯಕಾರಿಯಾಗಿ ಬೀಳುವ ಸ್ಥಿತಿಯಲ್ಲಿದ್ದು ಕೂಡಲೇ ಸಂಬಂಧಪಟ್ಟ ಇಲಾಖೆ ತೆರವುಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
25/07/2022 06:00 pm