ಸುರತ್ಕಲ್:ಸುರತ್ಕಲ್ ಚಾವಡಿ ಸಭಾಂಗಣದಲ್ಲಿ ಭಾಜಪಾ ಮಂಗಳೂರು ಉತ್ತರ ಮಂಡಲದ ವತಿಯಿಂದ ಕಾರ್ಗಿಲ್ ವಿಜಯದ ದಿವಸ ಆಚರಣೆ ನಡೆಯಿತು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಕಾರ್ಗಿಲ್ ವಿಜಯದ ಬಗ್ಗೆ ಮಾತನಾಡಿದರು
ಕಾರ್ಯಕ್ರಮದಲ್ಲಿ ಕಾರ್ಗಿಲ್ ವೀರ ಯೋಧರಾದ ಲೀಲಾಧರ್ ಕಡಂಬೋಡಿ ಹಾಗೂ ಸರ್ಜೆಂಟ್ ಶಿವರಾಂ ಭಟ್ ರವರನ್ನು ಗೌರವಿಸಲಾಯಿತು.
ಮಂಡಲದ ಅಧ್ಯಕ್ಷ ತಿಲಕ್ ರಾಜ ಕೃಷ್ಣಾಪುರ, ಜಿಲ್ಲಾ ಉಪಾಧ್ಯಕ್ಷ ಪ್ರಭಾ ಮಾಲಿನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಮತ್ತು ಸಂದೀಪ್ ಪಚ್ಚನಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
27/07/2022 07:55 am