ಸುರತ್ಕಲ್: ಮಂಗಳಪೇಟೆ ನಿವಾಸಿ ಮುಹಮ್ಮದ್ ಪಾಝಿಲ್( 23) ಎಂಬಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಇನಾಯತ್ ಆಲಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಯಾರೇ ಆಗಲಿ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು, ಪೊಲೀಸ್ ಇಲಾಖೆಯನ್ನು ಒತ್ತಾಯ ಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಸಂಭವಿಸುತ್ತಿದ್ದು, ಕೋಮುಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ. ಆದುದರಿಂದ ಇದನ್ನು ಸರಕಾರ ಹಾಗೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ. ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯಪ್ರವೃತ್ತರಾಗಿ ಕ್ರಮಕೈಗೊಳ್ಳಬೇಕೆಂದು ಸರಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ. ಇನಾಯತ್ ಆಲಿ ಒತ್ತಾಯ ಪಡಿಸಿದ್ದಾರೆ.
Kshetra Samachara
29/07/2022 04:23 pm