ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: 'ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸೂಕ್ತ ಕ್ರಮ'

ಮುಲ್ಕಿ: ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಹಾಗೂ ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಜಂಟಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿಯ ಸಭೆಯನ್ನು ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷಮನೋಹರ ಕೋಟ್ಯಾನ್ ಮಾತನಾಡಿ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸಮಿತಿಯ ಉಪಾಧ್ಯಕ್ಷ ಪದ್ಮಿನಿ ವಿ ಶೆಟ್ಟಿ, ಸದಸ್ಯರುಗಳಾದ ವೇದಾವತಿ, ಜಯಕುಮಾರ್, ಕಾರ್ಯದರ್ಶಿ ಯೋಗೀಶ್, ಪ್ರಜ್ಞಾ ಸಲಹಾ ಕೇಂದ್ರದ ಯೋಜನಾ ಸಂಯೋಜಕ ವಿಲಿಯಂ ಸ್ಯಾಮುಯೆಲ್, ವಲಯ ಸಂಯೋಜಕ ಅಶೋಕ್, ಪ್ರಜ್ಞಾ ಸಲಹಾ ಕೇಂದ್ರದ ಸಿಬ್ಬಂದಿಗಳು, ವಿಶೇಷ ಆಹ್ವಾನಿತರಾದ ನಿವೃತ್ತ ಆಕಾಶವಾಣಿ ಅಧಿಕಾರಿ ಶ್ಯಾಮ್ ಭಟ್, ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕ ರಾದ ಸುಲೋಚನಿ, ಸಮುದಾಯ ಆರೋಗ್ಯ ಅಧಿಕಾರಿ ವಿಲ್ಮಾ, ಆರೋಗ್ಯ ಸಹಾಯಕಿ ನಾಗವೇಣಿ ಮತ್ತು ಸುಮ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯ, ಸ್ವ-ಸಹಾಯ ಸಂಘದ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/07/2022 09:38 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ